Sunday 9 August 2015

Hindu

ಮರದ ಬಾಗಿಣ ಮತ್ತು ಮಹತ್ಬಗಳು..
ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು..
೧. ಅರಿಸಿನ : ಗೌರಿದೇವೀ.
೨. ಕುಂಕುಮ : ಮಹಾಲಕ್ಷ್ಮೀ
೩. ಸಿಂಧೂರ : ಸರಸ್ವತೀ
೪. ಕನ್ನಡಿ : ರೂಪಲಕ್ಷ್ಮೀ.
೫. ಬಾಚಣಿಗೆ : ಶೃಂಗಾರಲಕ್ಷ್ಮೀ.
೬. ಕಾಡಿಗೆ : ಲಜ್ಜಾಲಕ್ಷ್ಮೀ.
೭. ಅಕ್ಕಿ : ಶ್ರೀ ಲಕ್ಷ್ಮೀ.
೮. ತೊಗರಿಬೇಳೆ : ವರಲಕ್ಷ್ಮೀ.
೯. ಉದ್ದಿನಬೇಳೆ : ಸಿದ್ದಲಕ್ಷ್ಮೀ.
೧೦. ತೆಂಗಿನಕಾಯಿ : ಸಂತಾನಲಕ್ಷ್ಮೀ.
೧೧. ವೀಳ್ಯದ ಎಲೆ : ಧನಲಕ್ಷ್ಮೀ.
೧೨. ಅಡಿಕೆ : ಇಷ್ಟಲಕ್ಷ್ಮೀ.
೧೩. ಫಲ(ಹಣ್ಣು) : ಜ್ಞಾನಲಕ್ಷ್ಮೀ.
೧೪. ಬೆಲ್ಲ : ರಸಲಕ್ಷ್ಮೀ.
೧೫. ವಸ್ತ್ರ : ವಸ್ತ್ರಲಕ್ಷ್ಮೀ.
೧೬. ಹೆಸರುಬೇಳೆ : ವಿದ್ಯಾಲಕ್ಷ್ಮೀ.
ಮುತೈದೆ ದೇವತೆಯರು೧೬ ಜನರು. ಇವರನ್ನು ಷೋಡಶಲಕ್ಷ್ಮೀಯರು ಎಂದು ಕರೆಯುತ್ತಾರೆ..
ಗೌರಿ, ಪದ್ಮ, ಶುಚಿ, ಮೇಧಾ, ಸಾವಿತ್ರಿ, ವಿಜಯಾ, ಜಯಾ, ದೇವಸೇನಾ, ಸಾಹಾ, ಮಾತರಲೋಕಾ, ಮಾತಾರಾ, ಶಾಂತೀ, ಪೃಥ್ವಿ, ಧೃತೀ, ತುಷ್ಟೀ, ಸ್ವಧಾದೇವಿ..
ಸೀರೆ ಸೆರಗಿನಲ್ಲಿ ಮಹಾಲಕ್ಷ್ಮೀಯು ಸೌಭಾಗ್ಯ ರೂಪದಲ್ಲಿರುವುದರಿಂದ ಸೆರಗು ಹಿಡಿದು ಮರದ ಬಾಗಿಣ ಕೊಡುತ್ತಾರೆ..
ಮರದ ಬಾಗಿಣಕ್ಕೆ ಸಂಸ್ಕೃತದಲ್ಲಿ ವೇಣುಪಾತ್ರ ಎಂದು ಕರೆಯುತ್ತಾರೆ..
ಮರದಬಾಗಿಣದಲ್ಲಿ ನಾರಾಯಣನ ಅಂಶ ಇರುತ್ತದೆ..
ಮರವೆಂಬ ನಾರಾಯಣ ಮತ್ತು ಒಳಗಿರುವ ಲಕ್ಷ್ಮಿಯರು ತರಹ ಜೊತೆಯಲ್ಲಿ,
ದಂಪತಿಗಳು ಲಕ್ಷ್ಮೀ-ನಾರಾಯಣರ ತರಹ ಇರಲಿ ಅನ್ನೋ ಕಾರಣಕ್ಕೆ ಮತ್ತು ಸುಮಂಗಲಿ ತನ ಯಾವಾಗಲೂ ಇರಲಿ ಅನ್ನೋ ಕಾರಣಕ್ಕೆ ೧೬ ಸುಮಂಗಲೀ ದೇವತೆಗಳ ಸಾಕ್ಷಿಯಾಗಿ, ಬಾಗಿಣ ಕೊಡುತ್ತಾರೆ..
ಈ ೧೬ ದೇವತೆಗಳು ನಿತ್ಯಸುಮಂಗಲಿಯರು..
ಈ ೧೬ ದೇವತೆಗಳು ಸಂಸಾರದಲ್ಲಿ ಯಾವುದೇ ತರಹದ ಕಷ್ಟ,ನೋವು,ದುಃಖ ಬಂದರೂ ನಮ್ಮನ್ನು ರಕ್ಷಿಸಲಿ ಎಂದು ನೆನೆದು ಬಾಗಿಣ ಕೊಡಬೇಕು..
ಈ ೧೬ ದೇವತೆಗಳನ್ನು ಸ್ಮರಿಸುತ್ತಾ ಸ್ವರ್ಣಗೌರೀ ಹಬ್ಬದಲ್ಲಿ ಮಾಡುವ ಹೋರಾಪೂಜೆ, ಎಂದರೆ ದಾರಕ್ಕೆ ಮಾಡುವ ಪೂಜೆ..
೧೬ ಅರಿಸಿನ ದಾರ, ೧೬ ಗಂಟುಗಳು, ೧೬ ಬಾಗಿನ, ೧೬ ಎಳೆ ಗೆಜ್ಜೆವಸ್ತ್ರ, ಪೂಜಿಸಬೇಕೆಂದು ಗ್ರಂಥಗಳಲ್ಲಿ ಹೇಳಿದ್ದಾರೆ..
ದಾನಗಳು ಮತ್ತು ಫಲಗಳು..
೧. ಅರಿಸಿನ ದಾನ : ಅರಿಸಿನ ದಾನ ಮಾಡಿದಷ್ಟು ರೋಗ ನಿವಾರಣೆ ಆಗುತ್ತದೆ..
ಸುಮಂಗಲಿಯರಿಗೆ ಸೌಭಾಗ್ಯತನ ವೃದ್ಧಿಸುತ್ತದೆ..
ಸುಮಂಗಲಿಯರಿಗೆ ಸುಮಂಗಲಿತನ ಯಾವಾಗಲೂ ಇರಲಿ ಎಂಬ ಉದ್ದೇಶಕ್ಕೆ ಮೊದಲು ಅರಿಸಿನ ಕೊಡುತ್ತಾರೆ..
೨. ಕುಂಕುಮ ದಾನ : ಕುಂಕುಮವನ್ನು ಯಾರು ಧರಿಸುತ್ತಾರೋ ಅವರು ಬಹಳ ತೇಜಸ್ಸು ಮತ್ತ ನಂಬಿಕೆ ಜಾಸ್ತಿ ಆಗುತ್ತೆ..
ಕುಂಕುಮ ಧಾರಣೆಯಿಂದ ದೈವಶಕ್ತಿ ಜಾಸ್ತಿಯಾಗುತ್ತದೆ..
ದೃಷ್ಟಿದೋಷ ನಿವಾರಣೆ ಆಗುತ್ತದೆ..
ಕೋಪ, ಹಠ,ಕಮ್ಮಿ ಆಗುತ್ತದೆ..
೩. ಸಿಂಧೂರ ದಾನ ; ಸತಿ ಪತಿ ಕಲಹ ನಿವಾರಣೆ.., ರೋಗಭಾಧೆ,ಋಣಭಾದೆ, ನಿವಾರಣೆ..
ಮನೆಯಲ್ಲಿ ಸಂದೇಹ, ಒಳಜಗಳ, ಮಾಂತ್ರಿಕ ದೋಷಗಳು ನಿವಾರಣೆಯಾಗುತ್ತದೆ ..
ಶುಭವಾಗಲಿ..

No comments:

Post a Comment