Sunday 9 August 2015

Know Hinduism

ಹಿಂದೂ ಪುರಾಣಗಳಲ್ಲಿ ಬ್ರಹ್ಮ,ವಿಷ್ಣು ಮತ್ತು ಮಹೇಶ್ವರ ಈ ಮೂರು ದೇವತೆಗಳನ್ನು ತ್ರಿಮೂರ್ತಿಗಳು ಎಂದು ಉಲ್ಲೇಖಿಸಲಾಗಿದೆ.
ಬ್ರಹ್ಮ - ಸೃಷ್ಟಿ
ವಿಷ್ಣು - ಸ್ಥಿತಿ
ಶಿವ - ಲಯ
ಬ್ರಹ್ಮ - ಹಿಂದೂ ಧರ್ಮದಲ್ಲಿನ ತ್ರಿಮೂರ್ತಿ ದೇವತೆಗಳಲ್ಲೊಬ್ಬರು. ಬ್ರಹ್ಮನನ್ನು ಸೃಷ್ಟಿಕರ್ತ ಎನ್ನಲಾಗುತ್ತದೆ. ಸರಸ್ವತಿಯು ಬ್ರಹ್ಮನ ಹೆಂಡತಿ, ಮತ್ತು ನಾರದರು ಬ್ರಹ್ಮನ ಮಾನಸ ಪುತ್ರರು. ಚತುರ್ಮುಖ ಬ್ರಹ್ಮ ವಿಷ್ಣುವಿನ ನಾಭಿನಿಂದ ಹುಟ್ಟಿದ ಕಮಲದಲ್ಲಿ ಜನಿಸಿದನೆಂದು ಪ್ರತೀತಿ. ಹಾಗಾಗಿ ಬ್ರಹ್ಮನಿಗೆ ಜಡಜಜ ಎಂಬ ಹೆಸರು ಉಂಟು.. ಜಡ ಎಂದರೆ ಚಲನೆ ಇಲ್ಲದ ಎಂದರ್ಥ. ಜಡಕ್ಕೆ ಕೆಸರು ಎಂಬರ್ಥವೂ ಇದೆ. ಹೀಗೆ ಜಡಜ ಎಂದರೆ ಕೆಸರಿನಲ್ಲಿ ಜನಿಸಿದ್ದು ಅಂದರೆ ಕಮಲ ಎಂದರ್ಥ. ಹಾಗಾಗಿ ವಿಷ್ಣುವಿನ ನಾಭಿಕಮಲದಲ್ಲಿ ಜನಿಸಿದ ಬ್ರಹ್ಮನನ್ನು ಜಡಜಜ ಎಂದು ಕರೆಯಲಾಗುತ್ತದೆ.

ವಿಷ್ಣು- ವಿಷ್ಣು ತ್ರಿಮೂರ್ತಿಗಳಲ್ಲಿ ಒಬ್ಬನಾಗಿದ್ದು,ಸಕಲ ಲೋಕಗಳ ಸ್ಥಿತಿಕರ್ತ ಎಂದು ಹಿಂದೂ ಧರ್ಮ ನಂಬುತ್ತದೆ. ಧರ್ಮ ಸಂಸ್ಥಾಪನೆಗಾಗಿ ದಶಾವತಾರ ತಾಳಿ ಭೂಲೋಕವನ್ನು ರಕ್ಷಿಸಿದಾತ ಎಂದು ಪುರಾಣಗಳು ಕೊಂಡಾಡುತ್ತವೆ. ವಿಷ್ಣುವನ್ನು ಲಕ್ಮಿನಾರಾಯಣ, ಹರಿ, ಜನಾರ್ದನ, ಮಾಧವ, ಕೇಶವ, ಅಚ್ಚ್ಯುತ, ಶ್ರೀನಿವಾಸ ಎಂದೂ ಕರೆಯುತ್ತಾರೆ.

ಯಾರು ಮಂಗಳಕರನೋ ಅವನೇ ಶಿವ. ಹಿಂದೂ ಧರ್ಮದಲ್ಲಿ ಯಾವ ಯಾವಾಗ ನಿರಾಕಾರ ಉಪಾಸನೆ ಬರುತ್ತದೋ ಆಗ ಆ ಪರಬ್ರಹ್ಮವನ್ನು ಶಿವ ಎಂದೇ ಸಂಬೋಧಿಸುತ್ತಾರೆ. ಲಿಂಗಾಯತ ಮತದ ಪ್ರಕಾರ ಶಿವವೇ ಪರಬ್ರಹ್ಮ. ಕೆಲವರು ಹಿಂದೂ ಧರ್ಮದ ಪ್ರಕಾರ ತ್ರಿಮೂರ್ತಿಗಳಲ್ಲಿ ಒಬ್ಬನಾದ ಮಹೇಶ್ವರನೇ ಶಿವನೆಂದು ಭಾವಿಸುತ್ತಾರೆ.
ಶಿವನಿಗೆ ಲಯಕಾರಕ ಎಂದೂ ಸಹ ಕರೆಯುತ್ತಾರೆ. ಅಂದರೆ ಸೃಷ್ಟಿ ಮಾಡುವುದು ಬ್ರಹ್ಮನ ಕೆಲಸವಾದರೆ, ಆ ಸೃಷ್ಟಿಯಾದ ಆಕರಗಳಿಗೆ (ಜೀವಿಗಳಿಗೆ) ಸ್ಥಿತಿ ಕೊಡುವುದು ವಿಷ್ಣುವಿನ ಕೆಲಸ. ಈ ರೀತಿ ಸೃಷ್ಟಿ, ಸ್ಥಿತಿ ಪಡೆದ ಆಕರಗಳಿಗೆ ಲಯ (ಕೊನೆ) ಕಾಣಿಸುವವನು ಶಿವ. ಆದ್ದರಿಂದ ಶಿವನಿಗೆ ಲಯಕಾರ ಎಂದೂ ಸಹ ಕರೆಯುತ್ತಾರೆ. ಸಂಹಾರಕ ಅಥವ ಲಯಕಾರಕ ದೇವತೆ : ಶಿವ ಅಥವ ರುದ್ರ..

ॐ ಹಿ೦ದುತ್ವದ ವಿಚಾರಧಾರೆ ॐ

No comments:

Post a Comment