Thursday 17 March 2016

ಒಂದಿರುಳು ಕನಸಿನಲಿ..

- ಕೆ. ಎಸ್. ನರಸಿಂಹಸ್ವಾಮಿ
ಒಂದಿರುಳು ಕನಸಿನಲಿ ನನ್ನವಳ ಕೇಳಿದೆನು
ಚೆಂದ ನಿನಗಾವುದೆಂದು
ನಮ್ಮೂರು ಹೊನ್ನೂರು ನಿಮ್ಮೂರು ನವಿಲೂರು
ಚೆಂದ ನಿನಗಾವುದೆಂದು

ನಮ್ಮೂರು ಚೆಂದವೋ ನಿಮ್ಮೂರು ಚೆಂದವೋ
ಎಂದೆನ್ನ ಕೇಳಲೇಕೆ?
ನಮ್ಮೂರ ಮಂಚದಲಿ ನಿಮ್ಮೂರ ಕನಸಿರಲು
ವಿಸ್ತರಿಸಿ ಹೇಳಬೇಕೆ?
ನಮ್ಮೂರು ಚೆಂದವೋ ನಿಮ್ಮೂರು ಚೆಂದವೋ
ಎಂದೆನ್ನ ಕೇಳಲೇಕೆ?
ಎನ್ನರಸ ಸುಮ್ಮನಿರಿ ಎಂದಳಾಕೆ ||

ತೌರೂರ ದಾರಿಯಲಿ ತೆಂಗುಗಳು ತಲೆದೂಗಿ
ಬಾಳೆಗಳು ತೋಳ ಬೀಸಿ
ಮಲ್ಲಿಗೆಯ ಮೊಗ್ಗುಗಳು ಮುಳ್ಳ ಬೇಲಿಯ ವರಿಸಿ
ಬಳಕುತಿವೆ ಕಂಪ ಸೂಸಿ

ನಗುನಗುತ ನಮ್ಮೂರ ಹೆಣ್ಣುಗಳು ಬರುತಿರಲು
ನಿಮ್ಮೂರ ಸಂತೆಗಾಗಿ
ನವಿಲೂರಿಗಿಂತಲೂ ಹೊನ್ನೂರು ಸುಖವೆಂದು
ನಿಲ್ಲಿಸಿತು ಪ್ರೇಮ ಸೂಸಿ

ನಿಮ್ಮೂರ ಬಂಡಿಯಲಿ ನಮ್ಮೂರ ಬಿಟ್ಟಾಗ
ಓಡಿದುದು ದಾರಿ ಬೇಗ
ಪುಟ್ಟ ಕಂದನ ಕೇಕೆ ತೊಟ್ಟಿಲನು ತುಂಬಿತ್ತು
ನಿಮ್ಮೂರ ಸೇರಿದಾಗ

ಊರ ಬೇಲಿಗೆ ಬಂದು ನೀವು ನಮ್ಮನು ಕಂಡು
ಕುಶಲವನು ಕೇಳಿದಾಗ
ತುಟಿಯಲೇನೋ ನಿಂದು ಕಣ್ಣಲೇನೋ ಬಂದು
ಕೆನ್ನೆ ಕೆಂಪಾದುದಾಗ

Video link:
http://www.youtube.com/watch?v=xGcgHjnGBZY
English lyrics:
http://www.madhurabhavageethegalu.blogspot.com/2012/11/ondirulu-kanasinali.html

No comments:

Post a Comment